

ಬೆಂಗಳೂರು: ರಾಮನಗರ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ ನಾರಾಯಣ್ 5 ಲಕ್ಷ ರೂಪಾಯಿ, ಮಾಗಡಿ ಶಾಸಕ ಮಂಜುನಾಥ್ 2 ಲಕ್ಷ ರೂ. ದೇಣಿಗೆ ನೀಡಿದರು.
ರಾಮನಗರದಲ್ಲಿ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಸಚಿವರು, 5 ಲಕ್ಷ ರೂ. ಮೊತ್ತ ಚೆಕ್ ಅನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು. ಇದೇ ವೇದಿಕೆಯಲ್ಲಿ ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್ ಅವರು 2 ಲಕ್ಷ ರೂ. ದೇಣಿಗೆ ನೀಡಿದರು.
ದೇಣಿಗೆ ನೀಡಿದ ಡಾ.ಅಶ್ವಥ ನಾರಾಯಣ್ ಮತ್ತು ಮಂಜುನಾಥ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಭಿನಂದಿಸಿತು. ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಮತ್ತಿಕೆರೆ ಜಯರಾಂ, ರಾಮನಗರ ಜಿಲ್ಲಾಧ್ಯಕ್ಷ ಸೂರ್ಯ ಪ್ರಕಾಶ್, ಕಾರ್ಯದರ್ಶಿ ಶಿವರಾಜು, ರಾಜ್ಯ ಸಮಿತಿ ಸದಸ್ಯ ಸಿದ್ದಲಿಂಗೇಗೌಡ ಮತ್ತಿತರರು ಹಾಜರಿದ್ದರು.