ಸರ್ಕಾರದಿಂದ ತಾಲೂಕು ಕೇಂದ್ರಗಳಲ್ಲಿ ನೀಟ್​ ಕೋಚಿಂಗ್​ ಕೇಂದ್ರ ಆರಂಭಿಸಲು ಚಿಂತನೆ: ಡಾ.ಕೆ.ಸುಧಾಕರ್​

sudhakra
Published on

ಬೆಂಗಳೂರು: ತಾಲೂಕು ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ನೀಟ್​ ಕೋಚಿಂಗ್​ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್​ನ ಯು.ಟಿ.ಖಾದರ್​, ನೀಟ್​ನಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲೇ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ನೀಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್​, ನೀಟ್​ ಕೋಚಿಂಗ್​ ಸೆಂಟರ್​ ತೆರುಯುವುದರಿಂದ ನಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಯುದ್ಧಪೀಡಿತ ಯೂಕ್ರೇನ್​ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ಇಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರಿಸುವ ಸಾಧ್ಯತೆಗಳ ವಿಚಾರವಾಗಿ ರಾಜೀವ್​ಗಾಂಧಿ ವಿವಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂದರು.

ಇತ್ತೀಚಿಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕೂಡ ನಾವು ನೀಟ್​ ಎಕ್ಸಾಂ ವಿರೋಧಿಸುತ್ತೇವೆ. ಮೆಡಿಕಲ್ ಓದಲು ಬೇಕಿರುವ ವಿಷಯ ನೀಟ್​ ಎಕ್ಸಾಂನಲ್ಲಿ ಇಲ್ಲ. ಇದನ್ನು ಯಾವ ಪುರುಷಾರ್ಥಕ್ಕೆ? ಯಾರ ಅನುಕೂಲಕ್ಕೆ ಮಾಡಡಲಾಗಿದೆ? 2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದಿದ್ದರು. ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಆತ್ಮರೋಧನೆ ಕೇಳುತ್ತಿಲ್ಲವೇ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net