ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ್ ನಿಧನ

shankara patila munena koppa
Published on

ಹುಬ್ಬಳ್ಳಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ, ಜಿಲ್ಲಾ ನಿವೃತ್ತ ಆರೋಗ್ಯಾಧಿಕಾರಿ ಡಾ.ಮಲ್ಲನಗೌಡ ಪಾಟೀಲ್ ಮುನೇನಕೊಪ್ಪ ಅವರು ಬುಧವಾರ ಬೆಳಗ್ಗೆ ನಿಧನರಾದರು.

ಡಾ.ಮಲ್ಲನಗೌಡ ಪಾಟೀಲ್ ಮುನೇನಕೊಪ್ಪ ಅವರಿಗೆ 69 ವರ್ಷ ವಯಸ್ಸಾಗಿತ್ತು. ನವಲಗುಂದ ತಾಲೂಕಿನ ಅಮರಗೋಳ ಮೂಲದ ಅವರು ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಯುಸಿರೆಳೆದರು. ಸಾವಿನಲ್ಲೂ ಸಾರ್ಥಕತೆ ಮರೆದಿದ್ದು, ಹಲವರ ಬದುಕಿಗೆ ಬೆಳಕಾಗಿದ್ದಾರೆ.

ಮೃತರ ಆಶಯದಂತೆ ಅವರ ನೇತ್ರಗಳನ್ನು ಹುಬ್ಬಳ್ಳಿಯ ಡಾ.ಎಂ.ಎಂ.ಜೋಷಿ ನೇತ್ರ ಭಂಡಾರಕ್ಕೆ ದಾನ ಮಾಡಲಾಗಿದೆ. ಅವರು ವಿದ್ಯಾಭ್ಯಾಸ ಮಾಡಿದ ಕಿಮ್ಸ್​ ವೈದ್ಯಕೀಯ ಕಾಲೇಜಿಗೆ ಅವರ ಇಚ್ಛೆಯಂತೆ ಮೃತದೇಹವನ್ನು ಕುಟುಂಬಸ್ಥರು ಹಸ್ತಾಂತರಿಸಲಿದ್ದಾರೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಹುಬ್ಬಳ್ಳಿಯ ವಿಜಯನಗರದ ನಿವಾಸದಲ್ಲಿ ಪಾರ್ಥಿವ ಶರೀರದ ಅಮತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಕಮ್ಸ್​ ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತೆ.

ಡಾ.ಮಲ್ಲನಗೌಡ ಪಾಟೀಲ್ ಅವರು ಬುದುಕಿರುವಾಗಲೇ ನೇತ್ರದಾನ ಮತ್ತು ದೇಹದಾನದ ಬಗ್ಗೆ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ಅವರ ಇಚ್ಛೆಯಂತೆ ಕುಟುಂಬಸ್ಥರು ದಾನ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net