ದಾರಿ ತಪ್ಪಿದ ಚುನಾವಣಾ ಅಯೋಗ

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಿಕೊಂಡು ಹೋಗಬೇಕಿದ್ದ ಚುನಾವಣಾ ಅಯೋಗವು ದೇಶದಲ್ಲಿ ದಾರಿ ತಪ್ಪಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
prakash rai
ಪ್ರಕಾಶ್ ರೈfolder
Published on: 

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಿಕೊಂಡು ಹೋಗಬೇಕಿದ್ದ ಚುನಾವಣಾ ಅಯೋಗವು ದೇಶದಲ್ಲಿ ದಾರಿ ತಪ್ಪಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಸ್‌ಐಆರ್ ನಡೆಸಲಾಗಿದ್ದು, ಇದರಲ್ಲಿ ಹಲವು ಲೋಪಗಳು ಇವೆ. ಧ್ವನಿ ಎತ್ತದ ಸಮುದಾಯದವರ ಮತಗಳನ್ನು ಗುರಿಯಾಗಿಸಿಕೊಂಡು ರದ್ದುಗೊಳಿಸಲಾಗಿದೆ ಎಂದು ದೂರಿದರು.

ಎಸ್‌ಐಆರ್ ವಿರೋಧಿ ಹೋರಾಟಕ್ಕೆ ರೈತಪರ, ದಲಿತ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವುದು ಖುಷಿ ತಂದಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.23ರಂದು ಪ್ರಜಾಪ್ರಭುತ್ವ ಉಳಿವಿಗಾಗಿ ಜನತಾ ಮೆರವಣಿಗೆ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net