ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಎಂಎಲ್​ಸಿ ಸ್ಥಾನಕ್ಕೆ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

ibrahim
Published on

ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ.

ಸೋಮವಾರ ವೇಳಾಪಟ್ಟಿ ಪ್ರಕಟಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಜು.25ರಿಂದ ಆ.1ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ನಾಮಪತ್ರ ಹಿಂಪಡೆಯಲು ಆ.4ಕ್ಕೆ ಕೊನೇ ದಿನ. ಆ.11ರಂದು ಬೆಳಗ್ಗೆ 9 ರಿಂದ ಸಂಜೆ 4ರ ವರೆಗೆ‌ ಮತದಾನ ನಡೆಯಲಿದೆ. ಅಂದು ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ.

ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್​ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

2024ರ ಜೂನ್ 17ರ ವರೆಗೂ ಎಂಎಲ್​ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಉಪ ಚುನಾವಣೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net