

ಮಂಡ್ಯ: ಆಟೋ ಪಾರ್ಟ್ಸ್ ಅಂಗಡಿಗೆ ಬಂದಿದ್ದ ವ್ಯಕ್ತಿಯ ಮೊಬೈಲ್ ಅನ್ನು ಮತ್ತೊಬ್ಬ ವ್ಯಕ್ತಿ ಕದ್ದು ಪರಾರಿಯಾಗಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಕೆ.ಆರ್.ಪೇಟೆ ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯ ಹೋಂಡಾ ಶೋ ರೂಂ ಪಕ್ಕದಲ್ಲೇ ಇರುವ ಕಾವೇರಿ ಆಟೋ ಪಾರ್ಟ್ಸ್ನಲ್ಲಿ ಈ ಘಟನೆ ನಡೆದಿದೆ. ಅಂಗಡಿಗೆ ಬಂದಿದ್ದ ವ್ಯಕ್ತಿಯೊಬ್ಬ ತನಗೆ ಬೇಕಾದ ವಸ್ತುಗಳನ್ನ ತೆಗೆದುಕೊಂಡು ಹೋಗುವ ವೇಳೆ ಮೊಬೈಲ್ ಫೋನ್ಅನ್ನು ಅಂಗಡಿಯಲ್ಲಿ ಟೇಬಲ್ ಮೇಲೆಯೇ ಬಿಟ್ಟು ಹೋಗುತ್ತಾನೆ. ಈ ವೇಳೆ ಪಕ್ಕದಲ್ಲೇ ನಿಂತಿದ್ದ ವ್ಯಕ್ತಿಯೊಬ್ಬ ಆ ಮೊಬೈಲ್ ತೆಗೆದುಕೊಂಡು ಜೇಬಿಗೆ ಹಾಕೊಂಡು ಅಲ್ಲಿಂದ ತೆರಳಿದ್ದಾನೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.