

ಅಂಕೋಲಾ: ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಸಾಮಾಜಿಕ ವ್ಯವಸ್ಥೆಯ ಪ್ರತಿರೂಪವಾಗಿ ಇಂದಿಗೂ ಪ್ರಸ್ತುತವಾಗಿದೆ ಎಂದು ತಹಸೀಲ್ದಾರ್ ಅನಂತ ಶಂಕರ ಬಿ. ಹೇಳಿದರು.
ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ತಾಪಂ ಇ ಸುನೀಲ ಎಂ. ಮಾತನಾಡಿದರು.
ಕೆಎಲ್‌ಇ ಕಾಲೇಜಿನ ಉಪನ್ಯಾಸಕ ಮಂಜುನಾಥ ಇಟಗಿ ಉಪನ್ಯಾಸ ನೀಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ನಾಗರತ್ನಾ ನಾಗಪ್ಪ ಸಿದ್ದಿ, ಸಹನಾ ಮೋಹನ ಸಿದ್ದಿ ಅವರನ್ನು ಸನ್ಮಾನಿಸಲಾಯಿತು.
ಪಿಎಸ್‌ಐ ಸುನೀಲ, ಪುರಸಭೆ ಮುಖ್ಯಾಧಿಕಾರಿ ಅಕ್ಷತಾ ಎಚ್., ಉಪಸ್ಥಿತರಿದ್ದರು. ಮೆಟ್ರಿಕ ಪೂರ್ವ ವಸತಿ ನಿಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿನಾಯಕ ನಾಯ್ಕ ಸ್ವಾಗತಿಸಿದರು. ಶಿಕ್ಷಕ ರಾಜೇಶ ನಾಯಕ ಬಾಸಗೋಡ, ವೀಣಾ ನಾಯಕ ನಿರ್ವಹಿಸಿದರು.