ಹೃದಯಾಘಾತ: ಕರ್ತವ್ಯದಲ್ಲಿದ್ದಾಗಲೇ ಮುಖ್ಯಪೇದೆ ಸಾವು

police death
Published on

ಮಂಗಳೂರು: ಕರ್ತವ್ಯನಿರತ ಪೊಲೀಸ್ ಮುಖ್ಯಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

36 ವರ್ಷದ ಸಂತೋಷ್ ಮೃತರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂತೋಷ್​, ಅಪರಾಧ ಪ್ರಕರಣವೊಂದರ ತನಿಖೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು. ಡ್ಯೂಟಿಯಲ್ಲಿದ್ದ ಸಂತೋಷ್​ಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಸಂತೋಷ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ. ಸೊರಬ ಮೂಲದ ಸಂತೋಷ್​, ಮಂಗಳೂರಿ‌ನಲ್ಲಿ 12 ವರ್ಷದಿಂದ ಪೊಲೀಸ್​ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net