

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲ್ಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೀತಾ ಬಡಗಿ (28), ಶ್ರವಣ (6) ಶರಣ (4) ಎಂದು ಗುರುತಿಸಲಾಗಿದೆ.
ಮೃತ ಗೀತಾ ಅವರ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಯಾಳವಾರ ಗ್ರಾಮದ ಶ್ರೀಶೈಲ ಎಂಬುವವರ ಜತೆ ಗೀತಾ ಮದುವೆ ಮಾಡಿಕೊಂಡಿದ್ದರು. ಗಂಡನ ಜತೆ ಜಗಳವಾಡಿ ತವರು ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ಹೊಲಕ್ಕೆ ಮಕ್ಕಳೊಂದಿಗೆ ತೆರಳಿದ್ದಾಗ ಮಕ್ಕಳ ಸಮೇತ ಗೀತಾ ಕಾಲು ಜಾರಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದು, ಸ್ಥಳೀಯರು ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ದೇವರಹಿಪ್ಪರಗಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.