

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ನೋಡನೋಡುತ್ತಿದ್ದಂತೆ ರಸ್ತೆಯಲ್ಲೇ ಹೊತ್ತಿ ಉರಿದಿದೆ.
ಮಂಗಳೂರಿನ ಶೋಧನ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಅವಘಡ ಸಂಭವಿಸಿದೆ. ಇದನ್ನೂ ಓದಿರಿ video/ ಮರದ ಮೇಲೆ ಶವ ಇದೆಯೆಂದು ಬಂದ ಪೊಲೀಸರಿಗೆ ಕಾದಿತ್ತೊಂದು ಅಚ್ಚರಿ!
ಮಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಶೋಧನ್ ಬರುತ್ತಿದ್ದರು. ಮಾರ್ಗಮಧ್ಯೆ ಮಂಡಗದ್ದೆ ಬಳಿ ಕಾರಿನಲ್ಲಿ ಸುಟ್ಟವಾಸನೆ ಬರುತ್ತಿದ್ದಂತೆ ಶೋಧನ್ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಶೋಧನ್ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಅಗ್ನಿ ಶಾಮಕದಳಕ್ಕೆ ಕರೆ ಮಾಡಿದರೂ ಅವರು ಬರುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.