ಜನರ ರಕ್ಷಣೆಗಿಳಿದ ನೂತನ ಸಂಸದೆ ಮಂಗಲಾ ಅಂಗಡಿ

mangala angadi
Published on

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಕರೊನಾದಿಂದ ತತ್ತರಿಸಿರುವ ಜನರ ಬಳಿ ಹೊರಟ ನೂತನ ಸಂಸದೆ ಮಂಗಲಾ ಅಂಗಡಿ. ಮೇ 2ರಂದು ಆಯ್ಕೆಯಾದ 12 ಗಂಟೆಯಲ್ಲಿ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಕೋವಿಡ್ ಸೋಂಕಿನ ಪರಿಸ್ಥಿತಿ, ಲಸಿಕೆ, ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಮೇಲಿಂದ ಮೇಲೆ ಸಭೆ ನಡೆಸಿ ಕಟ್ಟುನಿಟ್ಟಿನ‌ ಕ್ರಮಕ್ಕೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕರೊನಾ ನಿರ್ವಹಣೆಯ ಸ್ಥಿತಿಗತಿಗಳ ಕುರಿತು ಜಿಲ್ಲಾಡಳಿತ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಸೋಂಕು ಹರಡುವಿಕೆಯ ನಿಯಂತ್ರಣ, ಸೋಂಕಿತರ ಚಿಕಿತ್ಸಾ ಪ್ರಕ್ರಿಯೆಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಇತರ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ, ಜನರಿಗೆ ಸಮಸ್ಯೆ ಉಂಟಾಗದಂತೆ ಕಾರ್ಯನಿರ್ವಹಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಹರೀಶ ಕುಮಾರ್, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಡಿಸಿಪಿ ಯಶೋಧಾ ವಂಟಗೋಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net