ಪಾಲಿಕೆ ಗದ್ದುಗೆ ಗುದ್ದಾಟಕ್ಕೆ ಮುಹೂರ್ತ ನಿಗದಿ

A muhurat has been fixed for punching at Palika Gaddu
Published on

ವಿಜಯಪುರ: ಮಹಾನಗರ ಪಾಲಿಕೆಯ ಮೇಯರ್- ಉಪ ಮೇಯರ್ ಸ್ಥಾನಗಳ ಅವಧಿ ಹಾಗೂ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ವಜಾಗೊಂಡಿದ್ದು, ಮತ್ತೆ ಚುನಾವಣೆಗೆ ಮುಹೂರ್ತ ನಿಗದಿಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

2023 ಅ. 30 ರಂದೇ ನಡೆಯಬೇಕಿದ್ದ ಚುನಾವಣೆ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಮುಂದೂಡಲ್ಪಟ್ಟಿತ್ತು. ಕೆಲವು ಸದಸ್ಯರು ಮೇಯರ್- ಉಪ ಮೇಯರ್ ಸ್ಥಾನದ ಅವಧಿ ಮತ್ತು ಮೀಸಲಾತಿ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಆ ಪ್ರಕಾರ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಇದೀಗ ರಿಟ್ ಅರ್ಜಿ ವಜಾಗೊಳಿಸಲಾಗಿದ್ದು, 2024 ಜ. 9ರಂದು ಚುನಾವಣೆ ನಡೆಸಲು ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ.

ಪಾಲಿಕೆಯ 21ನೇ ಅವಧಿಗೆ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗ ಹಾಗೂ ಉಪ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿ ಆದೇಶಿಸಲಾಗಿದೆ. ಆ ಪ್ರಕಾರ ಜ. 9 ರಂದು ಬೆಳಗ್ಗೆ 9ರಿಂದ 11ರವರೆಗೆ ನಾಮಪತ್ರ ಸ್ವೀಕರಿಸಲಾಗುತ್ತಿದ್ದು, ಮಧ್ಯಾಹ್ನ 1ಕ್ಕೆ ಸಭೆ ನಡೆಯಲಿದೆ. ಬಳಿಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net