ಆಮ್​ ಆದ್ಮಿಯ ಜನಸಂಪರ್ಕ- ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

mukyamantri chandru
Published on

ಬೆಂಗಳೂರು: ಖ್ಯಾತ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಅವರ ನಿರ್ದೇಶನದಂತೆ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶಿಸಿದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವಲ್ಲಿ ಮುಖ್ಯಮಂತ್ರಿ ಚಂದ್ರು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ನೂತನ ಜವಾಬ್ದಾರಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಯನ್ನು ಜಾರಿಗೆ ತಂದಿವೆ. ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿಯೂ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿಯು ಶ್ರಮಿಸಲಿದೆ. ನನ್ನ ಮೇಲೆ ವಿಶ್ವಾಸವ ಇಟ್ಟು ಸಮಿತಿಯ ಅಧ್ಯಕ್ಷ ಜವಾಬ್ದಾರಿ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು ಎಂದರು.

ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಜೂನ್‌ನಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನ ಪರಾಗ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರು ಅವನ್ನು ಪಕ್ಷದ ಮುಖಂಡರು ಬರಮಾಡಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net