ಚಾಮುಂಡಿ ಬೆಟ್ಟದಲ್ಲಿ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್​ ಚಾಲನೆ

mysore chamundi rathotsava
Published on

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಸರಳವಾಗಿ ನೆರವೇರಿತು.

ದೊಡ್ಡ ತೇರಿನ ಬದಲು ಚಿಕ್ಕ ತೇರಿನಲ್ಲಿ ದೇವಾಲಯದ ಒಳಾವರಣದಲ್ಲೇ ರಥೋತ್ಸವ ನಡೆಯಿತು.

ಕರೊನಾ ಮಾರ್ಗಸೂಚಿ ಪಾಲನೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ರಾಜಕುಮಾರಿ ತ್ರಿಷಿಕಾ ಕುಮಾರಿ ಒಡೆಯರ್, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ತುಂಬೆಲ್ಲ ಪುಷ್ಪಾಲಂಕಾರ ಕಂಗೊಳಿಸುತ್ತಿತ್ತು.  ಪ್ರತಿ ವರ್ಷ ದಸರಾ ಬಳಿಕ ಚಾಮುಂಡಿ ಬೆಟ್ಟದಲ್ಲಿ ಜಾತ್ರೆ ನಡೆಯೋದು ವಾಡಿಕೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net