ಮೈಸೂರಲ್ಲಿ ಗ್ರಾಮೀಣ ದಸರಾ ಉದ್ಘಾಟನೆ: ಸಂಭ್ರಮ ಹೆಚ್ಚಿಸಿದ ಸಾಂಸ್ಕೃತಿಕ ಕಲಾತಂಡಗಳು

gramina dasara
Published on

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಗುರುವಾರ ಗ್ರಾಮೀಣ ದಸರಾಗೆ ಮೈಸೂರಿನ ಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು.

ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗ್ರಾಮೀಣ ದಸರೆಗೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಲಾತಂಡಗಳ ಜತೆಗೆ ಆನೆ-ಕುದುರೆ ಮೆರವಣಿಗೆ, ಪೂರ್ಣಕುಂಭ ಹೊತ್ತ ಮಹಿಳೆಯರು ಗ್ರಾಮೀಣ ದಸರಾ ಮೆರುಗು ಹೆಚ್ಚಿಸಿದರು.

ನಾಡಹಬ್ಬ ದಸರಾ ನಗರಕ್ಕಷ್ಟೇ ಸೀಮಿತವಾಗಬಾರದು ಗ್ರಾಮಗಳಲ್ಲಿ ದಸರಾ ಆಚರಿಸಬೇಕು ಎಂಬ ಉದ್ದೇಶದಿಂದ ಈ ಭಾರಿ ಎಲ್ಲೆಡೆ ಆಚರಿಸಲಾಗುತ್ತಿದೆ. ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net