

ಮೈಸೂರು: ಅರಮನೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ನಂದೀಶ್ ಅರಸ್ ಅವರು ಕರೊನಾಗೆ ಬಲಿಯಾಗಿದ್ದಾರೆ.
ಮೈಸೂರು ಅರಸು ಮಂಡಳಿ ಕಾರ್ಯದರ್ಶಿಯಾಗಿದ್ದ ನಂದೀಶ್ ಅರಸ್ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಐದು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು(ಸೋಮವಾರ) ಬೆಳಗಿನ ಜಾವ ಕೊನೆಯುಸಿರೆಳೆದರು. ನಂದೀಶ್ ಅರಸ್ ಅವರು ಮೈಸೂರಿನ ಹಲವು ಸಂಘಟನೆ ಹಾಗೂ ಪ್ರಗತಿಪರ ಹೋರಾಟಗಳಲ್ಲಿ ಭಾಗಿಯಾಗಿದ್ದರು.