ಬೆಂಗಳೂರಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ

National Military School Platinum Jubilee
Published on

ಬೆಂಗಳೂರು: ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ಉದ್ಘಾಟಿಸಿದರು.

ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಧರ್ಮಪತ್ನಿ ಸವಿತಾ ಕೋವಿಂದ್ ಹಾಗೂ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ಇಂದು ಬೆಳಗ್ಗೆ ಬೆಂಗಳೂರಿ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮನಾಥ್ ಕೋವಿಂದ್ ಮತ್ತು ಸವಿತಾ ಕೋವಿಂದ್ ಅವರನ್ನು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಸ್ವಾಗತಿಸಿದ್ದರು. ನಾಳೆ(ಜೂ.14) ಬೆಂಗಳೂರು ಹೊರವಲಯದ ದೊಡ್ಡ ಕಲ್ಲಸಂದ್ರ ಬಳಿಯ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯ ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣೆ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net