

ಕುರುಗೋಡು: ಮಾನವ ಸಂಪನ್ಮೂಲವೇ ನಾಡಿನ ಅಮೂಲ್ಯ ಎಂದು ಅರಿತಿದ್ದ ಕೆಂಪೇಗೌಡರು ಕುಶಲಕರ್ಮಿಗಳ ಕೌಶಲವನ್ನು ದೇಶದ ಒಳಿತಿಗೆ ಬಳಸಿದಾಗ ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಮನಗಂಡಿದ್ದರು ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಇದನ್ನೂ ಓದಿ:ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಂಪೇಗೌಡರು ಧಾರ್ಮಿಕ ವ್ಯಕ್ತಿಯಾಗಿದ್ದು, ಎಲ್ಲ ಧರ್ಮಗಳನ್ನು ಸಮಭಾವದಿಂದ ಕಾಣುತ್ತಿದ್ದರು. ಇಂಥ ದೂರದೃಷ್ಟಿ ದೊರೆಯ ಆಶ್ರಯದಲ್ಲಿ ಬೆಂಗಳೂರು ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ನಗರವಾಗಿ ಬೆಳೆದಿದೆ ಎಂದರು. ರಸಪ್ರಶ್ನೆ, ಚಿತ್ರಕಲೆ, ಆಶುಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಪ್ರಮುಖರಾದ ಓಂಕಾರಪ್ಪ, ಜಡೇಪ್ಪ, ಬಂಗಿ ಮಲ್ಲಯ್ಯ ಇತರರಿದ್ದರು.