ವಾಯುವ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ: ಕಾಂಗ್ರೆಸ್​ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಮುನ್ನಡೆ

prakash hukkeri
Published on

ಬೆಳಗಾವಿ: ವಿಧಾನ ಪರಿಷತ್​ನ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಇಂದು ಬೆಳಗ್ಗೆಯಿಂದ ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್​ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1702 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನ ಮತ‌ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4,826 ಮತಗಳನ್ನ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್‌ಗೆ 3124 ಮತಗಳು ಬಂದಿವೆ. ಇದುವರೆಗೂ ಒಟ್ಟು 10 ಸಾವಿರ ಮತಗಳ ಎಣಿಕೆ ಆಗಿದೆ.‌ ಅದರಲ್ಲಿ 646 ಮತಗಳು ತಿರಸ್ಕೃತವಾಗಿವೆ. 9,355 ಮತಗಳು ಸಿಂಧು ಆಗಿವೆ. ಇನ್ನೂ 15 ಸಾವಿರ ಮತ ಎಣಿಕೆ ಬಾಕಿ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net