ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮುನ್ನೆಚ್ಚರಿಕೆ ವಹಿಸಲು ಸೂಚನೆ
Published on

ಬೇಲೂರು: ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕೆರೆ ಕಟ್ಟೆಗಳು ತುಂಬಿಕೊಂಡಿದ್ದು, ಗದ್ದೆಗಳು ಜಲಾವೃತವಾಗಿವೆ. ರಸ್ತೆ ಮಧ್ಯೆ ಮರ-ಗಿಡಗಳು, ವಿದ್ಯುತ್ ಕಂಬ ಬಿದ್ದಿರುವುದರಿಂದ ಸಂಚಾರಕ್ಕೆ ತೊಡಕುಂಟಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದ್ದು, ಕತ್ತಲೆಯಲ್ಲೇ ಕಾಲ ದೂಡುವಂತಾಗಿದೆ. ಸಮೀಪದ ಯಗಚಿ ಜಲಾಶಯಕ್ಕೆ ನಿರಿನ ಒಳ ಹರಿವು ಹೆಚ್ಚಾಗುತ್ತಿದ್ದು, ಯಾವುದೇ ಸಮಯದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ನದಿ ಪಾತ್ರದ ಜನರು ಮುನ್ನೆಚ್ಚರಿಕೆವಹಿಸಬೇಕು ಎಂದು ಯಗಚಿ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net