ಸದೃಢ ಆರೋಗ್ಯಕ್ಕೆ ಪೌಷ್ಟಿಕಾಂಶ ಆಹಾರ ಅಗತ್ಯ

WhatsApp Image 2023-08-18 at 3.34.11 PM
ಬಳ್ಳಾರಿಯ ಬಾಪೂಜಿ ನಗರದ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ 9 ಮತ್ತು 10 ನೇ ತರಗತಿ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ನಾರಾ ಭರತ್‌ರೆಡ್ಡಿ ವಿತರಿಸಿದರು. ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಪಾಲಿಕೆ ಸದಸ್ಯೆ ಉಮಾದೇವಿ ಮತ್ತಿತರರಿದ್ದರು.
Published on

ಬಳ್ಳಾರಿ : ವಿದ್ಯಾರ್ಥಿಗಳು ಸದೃಢ ಆರೋಗ್ಯ ಹೊಂದಿದ್ದರೆ, ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಹೇಳಿದರು.

ನಗರದ ಬಾಪೂಜಿನಗರದ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ 9 ರಿಂದ 10 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಅಡಿಯಲ್ಲಿ ಬೇಯಿಸಿದ ಮೊಟ್ಟೆ (ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಣೆ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮತ್ತು ರಕ್ತಹೀನತೆ ನಿವಾರಿಸಲು ರಾಜ್ಯ ಸರ್ಕಾರವು ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲಾಗುತ್ತಿದೆ ಎಂದರು.
ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ, ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಕಾರಣ, ಅಪೌಷ್ಟಿಕತೆ ಹೋಗಲಾಡಿಸಲು ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಿಸುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಾಂತ ಚಾಲನೆಗೊಂಡಿದೆ. ಇದರಿಂದಾಗಿ ಮಕ್ಕಳಲ್ಲಿ ಇನ್ನಷ್ಟು ಶಕ್ತಿ, ಸಾಮರ್ಥ್ಯ ಹೆಚ್ಚಾಗಲಿದೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ದೊರಕಿದ್ದು, ಜನಪರ, ರೈತಪರ, ಮಹಿಳೆಯರ ಸಬಲೀಕರಣಕ್ಕಾಗಿ, ಯುವಜನತೆ ಏಳಿಗೆಗಾಗಿ ಯೋಜನೆಗಳನ್ನು ಅನುಷ್ಟಾನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಪಾಲಿಕೆ ಸದಸ್ಯೆ ಉಮಾದೇವಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಾಂಜಿನೇಯುಲು ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಮುಖ್ಯಗುರುಗಳು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net