ಕಾಂಗ್ರೆಸ್​ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರ: ಸೋನಿಯಾ, ರಾಹುಲ್​ ದೂರವಾಣಿ ಕರೆ

Oscar Fernandes
Published on

ಮಂಗಳೂರು: ಕಾಂಗ್ರೆಸ್​ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮಗಳೂರಿನ ಆಸ್ಪತ್ರೆಯ ಐಸಿಯುನಲ್ಲಿ ಆಸ್ಕರ್ ಫರ್ನಾಂಡಿಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಫರ್ನಾಂಡಿಸ್ ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ಅವರು ಆಸ್ಕರ್ ಫರ್ನಾಂಡಿಸ್​ರ ಆರೋಗ್ಯ ವಿಚಾರಿಸಿದರು.

ಭಾನುವಾರ ಬೆಳಗ್ಗೆ ಯೋಗ ಮಾಡುತ್ತಿದ್ದ ಆಸ್ಕರ್, ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಪೆಟ್ಟೇನು ಆಗಿಲ್ಲ ಎಂದು ನಿರ್ಲಕ್ಷಿಸಿದ್ದರು. ಅಂದು ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಆ ವೇಳೆ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಬಳಿಕ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net