

ಪಾವಗಡ: ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಆವರಣದಲ್ಲಿ ಹೊಸದುರ್ಗ ಮೂಲದ ಡ್ರೈವರ್ ಕಂ ನಿರ್ವಾಹಕ ಶಶಿಧರ್(48) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಶಿಧರ್ ಪಾವಗಡ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟಕದ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಗುರುವಾರ ಡಿಪೋ ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಾವಗಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.