ವ್ಯಕ್ತಿ ತಾನು ಸ್ಫೂರ್ತಿಗೊಳ್ಳದೆ ಇತರರಿಗೆ ಸ್ಫೂರ್ತಿ ತುಂಬಲು ಸಾಧ್ಯವಿಲ್ಲ

hbr
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ ವ್ಯಕ್ತಿ ತಾನು ಸ್ಫೂರ್ತಿಗೊಳ್ಳದೆ ಇತರರಿಗೆ ಸ್ಫೂರ್ತಿ ತುಂಬಲು ಸಾಧ್ಯವಿಲ್ಲ. ಯಾವುದೇ ಕೆಲಸ ಮಾಡುವ ಮೊದಲು ನಮ್ಮಲ್ಲಿ ಇಚ್ಛಾಶಕ್ತಿ ಬೇಕು. 27 ವರ್ಷದ ಹಿಂದೆ ಇಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ವ್ಯವಸ್ಥೆ ಇಲ್ಲದಿದ್ದಾಗ ಏಕಾಂಗಿಯಾಗಿ ಶಾಲೆ ತೆರೆದು ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡಿ, ಇಂದು ಇಷ್ಟು ದೊಡ್ಡ ಶಿಕ್ಷಣ ಸಂಸ್ಥೆ ಬೆಳೆದಿದೆ. ಇದರ ಹಿಂದೆ ನಾಗರಾಜ್ ಶೆಟ್ಟಿ ದಂಪತಿ ಪರಿಶ್ರಮವಿದೆ ಎಂದು ಮಡಾಮಕ್ಕಿ ಬೆಪ್ಡೆಯ ನಿವೃತ್ತ ಮುಖ್ಯ ಶಿಕ್ಷಕ ಬಿ.ಶಿವರಾಮ ಶೆಟ್ಟಿ ಹೇಳಿದರು. ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ, ಗುರುವಂದನೆ ಗೌರವವನ್ನು ಸ್ವೀಕರಿಸಿ ಮಾತನಾಡಿದರು. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕರಾಗಿದ್ದು ದೇಶದ ಉನ್ನತ ಸ್ಥಾನಕ್ಕೇರಿದ ಧೀಮಂತ ವ್ಯಕ್ತಿ. ತನ್ನ ವ್ಯಕ್ತಿತ್ವ ವಾತಾವರಣದಲ್ಲಿರುವ ಇತರ ವ್ಯಕ್ತಿಗಳಿಗೂ ಪ್ರಭಾವ ಬೀರುತ್ತದೆ ಎಂಬುದಕ್ಕೆ ರಾಧಾಕೃಷ್ಣನ್ ಅವರ ವ್ಯಕ್ತಿತ್ವವೇ ಸಾಕ್ಷಿ ಎಂದರು. ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್., ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಸುಪ್ರಿತಾ ನಿರೂಪಿಸಿದರು. ದೀಪಕ್ ಎನ್. ಸ್ವಾಗತಿಸಿದರು. ಶಿಕ್ಷಕ ನಾಗೇಶ್ ವಂದಿಸಿದರು.

ಅನೇಕ ಮಕ್ಕಳಿಗೆ ಶಿಕ್ಷಣ ನೀಡಿ ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಿದ ಹೆಗ್ಗಳಿಕೆ ಬಿ.ಶಿವರಾಮ ಶೆಟ್ಟಿ ಅವರಿಗೆ ಸಲ್ಲುತ್ತದೆ. ನಿವೃತ್ತಿ ನಂತರ ತಮ್ಮನ್ನು ಸಮಾಜಮುಖಿ ಕೆಲಸದಲ್ಲಿ ತೊಡೆಸಿಕೊಂಡಿರುವುದು ನಮಗೆ ಮಾದರಿ. ನಾಲ್ಕು ವರ್ಷದಿಂದ ನಿರಂತರವಾಗಿ ಗುರುವಂದನಾ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದೇವೆ. ವಿದ್ಯಾರ್ಥಿಗಳನ್ನು ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಿದಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು, ನಮ್ಮೆಲ್ಲರ ಕರ್ತವ್ಯ. ಇದು ನಮ್ಮ ಶಿಕ್ಷಣ ಸಂಸ್ಥೆಯ ಭಾಗ್ಯ. ಎಚ್.ನಾಗರಾಜ ಶೆಟ್ಟಿ ಅಧ್ಯಕ್ಷ, ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net