ಐತಿಹಾಸಿಕ ಉಪ್ಪರಿ ಬುರ್ಜ್ ಮೇಲಿಂದ ಬಿದ್ದು ವ್ಯಕ್ತಿ ಸಾವು !

VJP UPPRA BURJ
Published on

ವಿಜಯಪು: ಐತಿಹಾಸಿಕ ಉಪ್ಪರಿ ಬುರ್ಜ್ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವಿಗೀಡಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಭಾನುವಾರ ರಾತ್ರಿಯೇ ಈ ಘಟನೆ ನಡೆದಿದ್ದು, ಬೆಳಗಿನ ಜಾವ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯ ಚಂದಾಬಾವಡಿ ನಿವಾಸಿ ಖಾಜಾಮೀನ ಗೈಬಿಸಾಬ ನದಾಫ್ (40) ಮೃತ ವ್ಯಕ್ತಿ. ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ಈತ ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಸೋಮವಾರ ಬೆಳಗ್ಗೆ ಶವ ಕಂಡ ಸ್ಥಳೀಯರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಗಾಂಧಿ ಚೌಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net