ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್​ ಏಕಾಏಕಿ ಸ್ಫೋಟ; ಆಯತಪ್ಪಿ ಬಿದ್ದು ಗಂಭೀರ ಗಾಯ

Injured 17 Feb 20
Published on

ಮೈಸೂರು: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್​ ಸ್ಫೋಟಗೊಂಡು, ಆತ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡಿನ ಕರಿಹುಂಡಿ ಗ್ರಾಮದಲ್ಲಿ ನಡೆದಿದೆ.

ಎಚ್.ಎಂ.ಬಸವರಾಜು(47) ಗಾಯಗೊಂಡವರು. ಇವರು ಬೈಕ್​ನಲ್ಲಿ ಹೋಗುತ್ತಿದ್ದಾಗ ಕೈಯಲ್ಲಿ ಮೊಬೈಲ್ ಹಿಡಿದುಕೊಂಡಿದ್ದರು. ಆದರೆ ಅದು ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಬೈಕ್​ ಆಯತಪ್ಪಿ ಬಿದ್ದ ಬಸವರಾಜ್​ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದು ವಿವೋ ಕಂಪನಿಗೆ ಸೇರಿದ ಮೊಬೈಲ್​ ಎನ್ನಲಾಗಿದೆ.

ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net