ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Crime Logo
Published on

ಮೈಸೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಜಯಪುರ ಠಾಣಾ ಪೊಲೀಸರು 1440 ರೂ. ವೌಲ್ಯದ 36 ಮದ್ಯದ ಟೆಟ್ರಾ ಪ್ಯಾಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಚುಂಚರಾಯನಹುಂಡಿ ನಿವಾಸಿ ವಿಷಕಂಠ ಬಂಧಿತ. ಈತ ತನ್ನ ಮನೆಯ ಮುಂಭಾಗವಿದ್ದ ಜಗಲಿಯ ಮೇಲೆ ಅಕ್ರಮವಾಗಿ ಮದ್ಯದ ಟೆಟ್ರಾ ಪ್ಯಾಕ್‌ಗಳನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಮಾಹಿತಿ ಪಡೆದ ಪೊಲೀಸರು ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net