ಸಾಮರಸ್ಯ ಸಂದೇಶ ಸಾರಿದ ತತ್ವಜ್ಞಾನಿ

blm (2)
Published on

ಕಾರ್ಕಳ: ಸಾವಾಜಿಕ ಸುಧಾರಕ, ತತ್ವಜ್ಞಾನಿ ಹಾಗೂ ಧಾರ್ಮಿಕ ನಾಯಕರೆಂದು ಪ್ರಸಿದ್ಧರಾದ ಶ್ರೀ ನಾರಾಯಣ ಗುರುಗಳು, ವರ್ಣ ವ್ಯವಸ್ಥೆಯಿಂದ ಉಂಟಾದ ಅಸವಾನತೆಗಳನ್ನು ವಿರೋಧಿಸಿ, ಹಿಂದುಳಿದ ಸಮುದಾಯಗಳ ಉದ್ಧಾರಕ್ಕಾಗಿ ಶ್ರಮಿಸಿದ್ದರು. ಒಂದು ಜಾತಿ, ಒಂದು ಧರ್ಮ, ಒಂದು ದೇವರು ಎಲ್ಲರಿಗೂ ವಾನವೀಯ ಏಕತೆ ಹಾಗೂ ಸಾಮರಸ್ಯದ ಸಂದೇಶವನ್ನು ಸಾದಿರದವರು ನಾರಾಯಣ ಗುರುಗಳು ಎಂದು ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್ ಹೇಳಿದರು.

ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಶ್ರೀನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪ್ರಸಾದ್ ಐಸಿರ, ನಿರಂಜನ್ ಜೈನ್, ಪ್ರಶಾಂತ್ ಕೋಟ್ಯಾನ್, ಅಶೋಕ್ ಸುವರ್ಣ, ರಾಮಚಂದ್ರ ನಾಯಕ್, ರವೀಂದ್ರ ಮೊಯಿಲಿ, ಪ್ರಕಾಶ್ ರಾವ್, ಸುರೇಶ್ ಕಾಬೆಟ್ಟು, ಭಾರತಿ ಅಮೀನ್, ಮೀನಾಕ್ಷಿ ಗಂಗಾಧರ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ಮತ್ತಿತರ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net