ಸುದ್ದಿ ಛಾಯಾಚಿತ್ರಗ್ರಾಹಕರಿಗೆ ಛಾಯಾಚಿತ್ರ ಸ್ಪರ್ಧೆ

Published on

ಮಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000 ರೂ., 25,000 ರೂ. ಹಾಗೂ 15,000 ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, 2024 ರ ಜನವರಿ 1 ರಿಂದ 2025 ಜನವರಿ 31 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಕರ್ತರಿಗಾಗಿ ನೀಡುವ ಮಾನ್ಯತಾ ಕಾರ್ಡ್ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು. ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು. ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448227768 ಹಾಗೂ 9449245980 ಸಂಪರ್ಕಿಸಬಹುದು ಎಂದು ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net