ಗೋವಿನಜೋಳದ ತೆನೆ ರಾಶಿ ಬೆಂಕಿಗಾಹುತಿ

SGN BENKI
Published on

ಶಿಗ್ಗಾಂವಿ: ಆಕಸ್ಮಿಕ ಬೆಂಕಿ ತಗುಲಿ ಗೋವಿನಜೋಳದ ತೆನೆ ರಾಶಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಮುಗಳಿ ಗ್ರಾಮದಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.

ಮುಗಳಿ ಗ್ರಾಮದ ಮಹದೇವಪ್ಪ ತಳವಾರ ಎಂಬುವವರಿಗೆ ಸೇರಿದ 13 ಎಕರೆ ಜಮೀನಿನಲ್ಲಿ ಬೆಳೆದಿದ್ದ 8 ಲಕ್ಷ ರೂ. ಮೌಲ್ಯದ ಗೋವಿನಜೋಳದ ತೆನೆ ರಾಶಿ ಬೆಂಕಿಗಾಹುತಿಯಾಗಿದೆ. ಘಟನೆ ಸುದ್ದಿ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಶಿಗ್ಗಾಂವಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿ ಸ್ಥಳೀಯ ಆಡಳಿತದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net