ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ

20sdp3 ARASU NAIK
Published on

ಸಿದ್ದಾಪುರ: ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ನೀಡುವುದರ ಜತೆಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಕಾರಣರಾದ ದಿ.ದೇವರಾಜ ಅರಸು ಅವರನ್ನು ಎಲ್ಲರೂ ಸದಾ ಕಾಲ ಸ್ಮರಿಸಬೇಕಾಗಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.

ಸ್ಥಳೀಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಪಂ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 108ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅರಸು ಅವರು ನೀಡಿದ ಬಳುವಳಿಯಿಂದ ಇಂದು ತಲೆ ಎತ್ತಿ ಓಡಾಡಲು ಸಾಧ್ಯ ಆಗಿದೆ. ಭೂಮಾಲೀಕರನ್ನು ಎದುರು ಹಾಕಿಕೊಂಡು ಉಳುವವನೇ ಹೊಲದೊಡೆಯ ಕಾನೂನಿನ ಮೂಲಕ ಭೂಮಿಯ ಹಕ್ಕು ನೀಡಿದ ಹಿಂದುಳಿದ ವರ್ಗಗಳ ಹರಿಕಾರರಾಗಿದ್ದಾರೆ. ನಿಸ್ವಾರ್ಥ ಮನೋಭಾವ ಹೊಂದಿದಾಗ ಮಾತ್ರ ದೇವರಾಜ ಅರಸು ಅವರಂತೆ ನೊಂದವರ ಬಾಳಿಗೆ ಬೆಳಕಾಗಲು ಸಾಧ್ಯ ಎಂದರು.

ಪಪಂ ಸದಸ್ಯರಾದ ರವಿಕುಮಾರ ನಾಯ್ಕ, ಸುಧೀರ ಕೊಂಡ್ಲಿ, ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಬಿಇಒ ಜಿ.ಐ. ನಾಯ್ಕ ಇತರರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಅಧ್ಯಯನ ಮಾಡಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಆಶಾ ಬೇಗಂ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net