ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ

HNR sport
Published on

ಹೊನ್ನಾವರ: ದಸರಾ ಕ್ರೀಡಾಕೂಟವು ಎಲ್ಲ ವಯಸ್ಸಿನ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆಯಾಗಿದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪ್ರಕಾಶ ನಾಯ್ಕ ಹೇಳಿದರು.

ಪಟ್ಟಣದ ಎಸ್​ಡಿಎಂ ಪದವಿ ಕಾಲೇಜು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಆರ್.ಕೆ. ಮೇಸ್ತ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಪತ್ರಕರ್ತ ಎಚ್.ಎಂ. ಮಾರುತಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಬು ನಾಯ್ಕ, ಸಾಧನಾ ಬರ್ಗಿ, ದೀಪಕ್ ಗಾಂವ್ಕರ್, ಶಂಕರ ನಾಯ್ಕ ಉಪಸ್ಥಿತರಿದ್ದರು. ಸಹಾಯಕ ಯುವ ಜನಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಸ್ವಾಗತಿಸಿದರು. ಎಂ.ಟಿ. ಗಣಪತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net