

ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ಘಟಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಒದಗಿಸಿಕೊಡುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮನೋಹರ್ ಎಸ್.ದೊಡ್ಡಮನಿ ಹೇಳಿದರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ದಿನಾಚರಣೆ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು. ಪ್ರಾಂಶುಪಾಲ ಸುದರ್ಶನ್ ಬಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಶಶಿಧರ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಸ್ವಯಂಸೇವಕರು ಎನ್ನೆಸ್ಸೆಸ್ ಗೀತೆ ಹಾಡಿದರು. ಎನ್.ಎಸ್.ಎಸ್ ಘಟಕ ನಾಯಕಿ ಪ್ರಾಜ್ಞವಿ ಸ್ವಾಗತಿಸಿದರು. ನಾಯಕ ಧನುಷ್ ವಂದಿಸಿದರು. ಸ್ವಯಂಸೇವಕಿ ಹರ್ಷಾ ಕಾರ್ಯಕ್ರಮ ನಿರೂಪಿಸಿದರು.