ಸೇವಾ ಮನೋಭಾವನೆ ಬೆಳೆಸಲು ವೇದಿಕೆ

Bel_Nss
Published on

ಬೆಳ್ತಂಗಡಿ: ವ್ಯಕ್ತಿತ್ವ ವಿಕಸನ, ಶಿಸ್ತು, ಸಮಯ ಪಾಲನೆ, ಸಹಬಾಳ್ವೆ ಇತ್ಯಾದಿಗಳನ್ನು ಕಲಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಡೀನ್ ಪ್ರೊ.ವಿಶ್ವನಾಥ ಪಿ. ಹೇಳಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು.

ಪ್ರಾಚಾರ್ಯ ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೊತ್ತುಗುರಿ ಇಲ್ಲದ ಯುವ ಜನತೆಗೆ ಸರಿಯಾದ ಮಾರ್ಗದರ್ಶನ ನೀಡಲು ಇರುವ ಯೋಜನೆಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು. ಪ್ರಾಪ್ತಿ ರಾಷ್ಟ್ರೀಯ ಸೇವಾ ಯೋಜನೆಯ ಪರಿಚಯಾತ್ಮಕ ಭಾಷಣ ಮಾಡಿದರು. ನೂತನ ಸೂಚನಾ ಫಲಕ ಅನಾವರಣಗೊಳಿಸಲಾಯಿತು. ರಾಷ್ಟ್ರೀಯ ಭಾವೈಕ್ಯತೆ ಶಿಬಿರದಲ್ಲಿ ಪಾಲ್ಗೊಂಡ ಸ್ವಯಂಸೇವಕಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು.

ರಾ.ಸೇ.ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಘಟಕ ನಾಯಕರಾದ ಆದಿತ್ಯ ವಿ, ಪ್ರಾಪ್ತಿ ಗೌಡ ಉಪಸ್ಥಿತರಿದ್ದರು. ಆದಿ ಸ್ವಾಗತಿಸಿದರು. ಯಕ್ಷಿತ್ ವಂದಿಸಿದರು. ಕಾರ್ಯದರ್ಶಿ ಐಶ್ವರ್ಯ ನಿರೂಪಿಸಿದರು. ಸ್ವಯಂಸೇವಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net