

ಬೆಂಗಳೂರು: ಕರೊನಾ ಸೋಂಕಿತರಿಗೆ ಬೆಡ್ ನೀಡದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬನ್ನೆರುಘಟ್ಟದ ಅಪೋಲೊ ಹಾಸ್ಪಿಟಲ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.
ಆಸ್ಪತ್ರೆ ಸಿ.ಇ.ಓ ಸೇರಿ ಆರು ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಕರೊನಾ ಸೋಂಕಿತರಿಗೆ ಬೆಡ್ ನೀಡದೆ ವಂಚನೆ ಆರೋಪದಡಿ ಎಫ್ ಐ ಆರ್ ದಾಖಲಿಸಲಾಗಿದೆ. ಡಿಶ್ಚಾರ್ಜ್ ಆಗಿರುವ ಸೋಂಕಿತರನ್ನ ಅಡ್ಮಿಟ್ ಆಗಿದ್ದಾರೆ ಎಂದು ಸರ್ಕಾರಕ್ಕೆ ವಂಚನೆ ಮಾಡಲಾಗಿತ್ತು.
ಶೇಕಡಾ ೫೦ ರಷ್ಟು ಬೆಡ್ಗಳು ಕರೊನಾ ಸೋಂಕಿತರಿಗೆ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದರೂ ಆಸ್ಪತ್ರೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದೆ. ಈ ಕುರಿತು ಬೊಮ್ಮನಹಳ್ಳಿ ವಲಯ ವೈದ್ಯಾಧಿಕಾರಿ ನಾಗರಾಜ್ ರಿಂದ ದೂರು ದಾಖಲಾಗಿದೆ.
ಐಪಿಸಿ ಸೆಕ್ಷನ್ 188, 420 ಹಾಗೂ ದಿ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ಆಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.