ತಾಯಿ ಸಾವಿನಿಂದ ನೊಂದು ಪೊಲೀಸ್ ಪೇದೆ ಆತ್ಮಹತ್ಯೆ

ULL.FEB-19-VIMALANATHA
Published on

ಉಳ್ಳಾಲ: ತಾಯಿಯನ್ನು ಕಳೆದುಕೊಂಡ ದುಃಖದಿಂದ ಹೊರಬರಲಾಗದೆ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ನಿವಾಸಿ ವಿಮಲನಾಥ ಜೈನರ್(28) ಆತ್ಮಹತ್ಯೆ ಮಾಡಿಕೊಂಡವರು. ಅಸೈಗೋಳಿಯಲ್ಲಿರುವ ಕೆಎಸ್‌ಆರ್‌ಪಿಯ ಏಳನೇ ಬೆಟಾಲಿಯನ್ ನೂತನ ಬ್ಯಾಚ್‌ನ ಕಾನ್‌ಸ್ಟೆಬಲ್ ಆಗಿದ್ದರು. ಆರೋಗ್ಯ ಸಮಸ್ಯೆ ಹೊಂದಿದ್ದ ಅವರು ಅಸೈಗೋಳಿ ಸೈಟ್‌ನಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಅವರ ತಾಯಿ ನಾಲ್ಕು ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು. ಆರೋಗ್ಯ ಸಮಸ್ಯೆಯೊಂದಿಗೆ ತಾಯಿಯನ್ನು ಕಳೆದುಕೊಂಡ ದುಃಖದಿಂದ ಹೊರಬರಲಾಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಭಾನುವಾರ ಸ್ನೇಹಿತನೊಂದಿಗೆ ಕರ್ತವ್ಯಕ್ಕೆ ತೆರಳಿದ್ದು, ಈ ಮಧ್ಯೆ ತಾನು ವಾಸವಿದ್ದ ಕೋಣೆಗೆ ಮರಳಿದ್ದರು. ತುಂಬಾ ಹೊತ್ತಾದರೂ ವಾಪಾಸ್ ಬಾರದ ಕಾರಣ ಸ್ನೇಹಿತ ಕೊಠಡಿಗೆ ಹೋಗಿ ನೋಡಿದಾಗ ವಿಮಲನಾಥ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net