

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅ.24ರಂದು ಜಿಲ್ಲಾ ಮತ್ತು ನಗರ ಘಟಕದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಲಿಖಿತ ಪರೀಕ್ಷೆಗೆ ಕರೆ ಪತ್ರಗಳನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದು.
ಆದರೆ, ಈ ಬಾರಿ ಅತಿ ಹೆಚ್ಚು ಅಭ್ಯರ್ಥಿಗಳು ಒಂದೇ ಬಾರಿ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದರಿಂದ ಸರ್ವರ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಒಂದು ವೇಳೆ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಸಾಧ್ಯವಾಗದೆ ಇದ್ದರೇ ಅಂತಹ ಅಭ್ಯರ್ಥಿಗಳಿಂದ ಇತರ ದಾಖಲೆಗಳನ್ನು ಸಲ್ಲಿಸಬೇಕು. ಈ ದಾಖಲೆಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ನಾಮಿನಲ್ ರೋಲ್ ಪ್ರತಿಯೊಂದಿಗೆ ಹೋಲಿಕೆ ಮಾಡಿ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥ ಅಮ್ರಿನ್ ಪಾಲ್ ಸೂಚಿಸಿದ್ದಾರೆ.