

ಶಿವಮೊಗ್ಗ: ಶಿವಮೊಗ್ಗದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 31 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಕರಕೆ ಹಕ್ಲು ತಿರುವಿನಲ್ಲಿ ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ತಿರುವು ಪಡೆಯುತ್ತಿರುವ ವೇಳೆಯಲ್ಲಿ ಮುಗುಚಿಬಿದ್ದಿದೆ.
ಶನಿವಾರ ಮುಂಜಾನೆ 5 ಗಂಟೆಗೆ ತೀರ್ಥಹಳ್ಳಿ ಮಾರ್ಗವಾಗಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕನ ಅಜಾಕರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.