ಕೆಎಚ್‌ಬಿ ಬಡಾವಣೆಯಲ್ಲಿ ಮೆರವಣಿಗೆ

62
Published on

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಬೆಂಬಲಿಸಿ ಹೂಟಗಳ್ಳಿಯ ಕೆಎಚ್‌ಬಿ ಬಡಾವಣೆಯಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ಬಡಾವಣೆಯ ವರ್ತಕರು, ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ನಾಗರಿಕರು ಬಡಾವಣೆಯ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆ ಕೂಗಿದರು.

ಕಾವೇರಿ ನೀರು ನಿಲ್ಲಿಸುವಂತೆ ಒತ್ತಾಯಿಸಿ ಹೂಟಗಳ್ಳಿಯ ನಗರಾಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಆರ್.ಸಿ.ಗಂಗನಗೌಡ, ಗುರುಸ್ವಾಮಿ, ದೇವರಾಜ್, ರವಿ, ರಾಜಕುಮಾರ್, ಅರ್ಜುನ್, ವೆಂಕಟೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net