

ಶಿರ್ವ: ಆಚಾರ್ಯ ಮಧ್ವರ ಅವತಾರ ಭೂಮಿ ಶ್ರೀ ಕ್ಷೇತ್ರ ಪಾಜಕದಲ್ಲಿ ಬುಧವಾರ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಶಿರೂರು ಶ್ರೀ ವೇದವರ್ಧನತೀರ್ಥ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಸುಧಾನುವಾದ ಕಾರ್ಯಕ್ರಮ ಜರುಗಿತು.
ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಪ್ರಾಂಶುಪಾಲ ವಿದ್ವಾನ್ ಸತ್ಯನಾರಾಯಣ ಆಚಾರ್ಯ, ಪಾಜಕ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಉಪಾಧ್ಯಾಯ, ಭಕ್ತಿ ಸಿದ್ಧಾಂತೋತ್ಸವ-ರಾಮೋತ್ಸವ ಸಮಿತಿ ಸದಸ್ಯರಾದ ವಿದ್ವಾಂಸ ಕುತ್ಪಾಡಿ ಕೃಷ್ಣರಾಜ ಆಚಾರ್ಯ, ವಿಠಲ ಭಟ್ ನಂದಳಿಕೆ, ಅನಂತ ಸಾಮಗ ಸಗ್ರಿ, ವಿದ್ವಾಂಸರು, ವಿದ್ಯಾಪೀಠದ ವಿದ್ಯಾರ್ಥಿಗಳು, ಭಕ್ತರು ಉಪಸ್ಥಿತರಿದ್ದರು.