

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಂದು ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದೆ. ಅದನ್ನು ಹೊರತೆಗೆಯುವ ಸಲುವಾಗಿ ಹಲವಾರು ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ ಎಂದರು.
ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿಶ್ಚಲ್ ಜಿ.ಶೆಟ್ಟಿ, ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನ ವ್ಯವಸ್ಥಾಪಕ ಮಂಜುಕುಮಾರ್, ಉದ್ಯಮಿ ಚಂದ್ರಶೇಖರ ಸಾಲಿಯಾನ್, ಸಹಕಾರಿ ಪ್ರಕೋಷ್ಟದ ಬಂಟ್ವಾಳ ತಾಲೂಕು ಸಂಚಾಲಕ ಜಯರಾಮ ರೈ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್‌ಎನ್, ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಡಾ.ಕಮಲಾ ಪ್ರಭಾಕರ್ ಭಟ್ ಹಾಗೂ ಮುಖ್ಯಶಿಕ್ಷಕ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರಾಪ್ತಿ ರೈ ನಿರೂಪಿಸಿದರು. ಸುಶ್ಮಿತಾ ಭಟ್ ಸ್ವಾಗತಿಸಿದರು. ನಿನಾದ್ ಕೈರಂಗಳ ವಂದಿಸಿದರು.