ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ: ಶಾಸಕ ಚೆನ್ನಿ ಭರವಸೆ

chenni
ಸಾರ್ವಜನಿಕರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ನೋಟ್ ಮಾಡಿಕೊಂಡ ಎಸ್.ಎನ್.ಚನ್ನಬಸಪ್ಪ.
Published on

ಶಿವಮೊಗ್ಗ: ಈಗ ನಗರದಲ್ಲಿರುವ ಅನೇಕ ಸಮಸ್ಯೆಗಳು ಬಹಳ ಹಿಂದಿನವು. ಕೆಲವು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲೇ ಪರಿಹಾರ ಸಿಗಬೇಕಿದೆ. ಇಂತಹ ಸಮಸ್ಯೆಗಳ ಬಗ್ಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಸೋಮವಾರ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ ಅವರು, ಸುಮಾರು ಎರಡು ತಾಸು ನಾಗರಿಕರ ದೂರುಗಳಿಗೆ ಕಿವಿಯಾದರು. ಜನರು ಹೇಳಿದ ಸಮಸ್ಯೆಗಳನ್ನು ನೋಟ್ ಮಾಡಿಕೊಂಡರು. ಕೆಲವು ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಆದ್ಯತೆಗನುಸಾರ ಪರಿಹಾರ ಕಂಡುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಯಾವ ಸಮಸ್ಯೆಗಳನ್ನು ಯಾವ ಕಾಲಮಿತಿಯೊಳಗೆ ಪರಿಹರಿಸುತ್ತೇನೆ ಎಂಬುದನ್ನು ನಾನು ಬಹಿರಂಗಪಡಿಸಲು ಸಿದ್ದನಿದ್ದೇನೆ. ನಗರದಲ್ಲಿ ಹಸಿರೀಕರಣ, ಕುಡಿಯುವ ನೀರು, ನೈಮಲ್ಯ, ರಸ್ತೆ, ಯುಜಿಡಿ, ಚರಂಡಿ, ಸಂಚಾರ ವ್ಯವಸ್ಥೆಯನ್ನು ಸರಿಪಡಿಸುವುದಕ್ಕೂ ಆದ್ಯತೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.
ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್.ಗೋಪಾಲ್, ಸಂಚಾಲಕ ಕೆ.ವಿ.ವಸಂತಕುಮಾರ್, ಪ್ರಮುಖರಾದ ಟಿ.ಆರ್.ಅಶ್ವತ್ಥ ನಾರಾಯಣ ಶೆಟ್ಟಿ, ಡಾ.ಸತೀಶ್ ಕುಮಾರ್ ಶೆಟ್ಟಿ, ಎಸ್.ಬಿ.ಅಶೋಕ ಕುಮಾರ್, ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ ಮುಂತಾದವರು ಸಂವಾದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net