

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು ಅಸ್ಸಾಂ ಮತ್ತು ಮೈಸೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಗಿರಾಕಿಯೊಬ್ಬನನ್ನು ವಶಕ್ಕೆ ಪಡೆಯುವ ಜತೆಗೆ ಈ ದಂಧೆ ನಡೆಸುತ್ತಿದ್ದ ಮಹಿಳೆಯನ್ನೂ ಬಂಧಿಸಿದ್ದಾರೆ.
ವಿಜಯನಗರದ ಮನೆಯೊಂದರಲ್ಲಿ ಇಬ್ಬರು ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮತ್ತು ವಿಜಯನಗರ ಪೊಲೀಸರು ಜಂಟಿ ದಾಳಿ ಮಾಡಿದ್ದಾರೆ. ಬಂಧಿತ ಮಹಿಳೆ 2019ರಲ್ಲಿ ಹೂಟಗಳ್ಳಿಯ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಳು. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.