PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ನಾಲ್ವರ ಜಾಮೀನು ಅರ್ಜಿ ವಜಾ

PSI
Published on

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಗಳ ಪೈಕಿ ನಾಲ್ವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎಸಿಎಂಎಂ ನ್ಯಾಯಾಲಯ ತಿರಸ್ಕರಿಸಿದೆ.

ಅಭ್ಯರ್ಥಿಗಳಾದ ಎಸ್.ಜಾಗೃತ್‌, ಆರ್‌.ಮಧು, ಮಧ್ಯವರ್ತಿಗಳಾದ ಸಿ.ಎನ್‌. ಶಶಿಧರ ಮತ್ತು ಶರತ್‌ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ಮಂಗಳವಾರ ವಜಾಗೊಂಡಿದೆ.

ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್, 55 ಸಾವಿರ ಅಭ್ಯರ್ಥಿಗಳಿಗೆ ಅನ್ಯಾಯ ಎಸಗಿದ ಆರೋಪ ಇದಾಗಿದೆ. ಪೊಲೀಸ್ ಇಲಾಖೆಯಲ್ಲೇ ಈ ರೀತಿ ನಡೆದರೆ ನಾಳೆ ಇಂತಹವರು ಹುದ್ದೆಗಳನ್ನು ಅಲಂಕರಿಸಿದ ಮೇಲೆ ಭ್ರಷ್ಟಾಚಾರಕ್ಕೆ ಇಳಿಯುತ್ತಾರೆ. ಅಷ್ಟೇ ಅಲ್ಲ, ತನಿಖೆಯೂ ಬಾಕಿ ಇದೆ. ಹಾಗಾಗಿ ಜಾಮೀನು ನೀಡಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net