

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪರೀಕ್ಷೆಯ ಹಾಲ್ ಟಿಕೆಟ್ ಹಾಗೂ ಎರಡನೇ ಪತ್ರಿಕೆಯ OMR ಶೀಟ್ ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.