ಪುನೀತ್​ ರಾಜ್​ಕುಮಾರ್​ ವಿಧಿವಶ: ಭಾನುವಾರದವರೆಗೂ ಬಾರ್​, ಪಬ್​ಗಳು ಬಂದ್​

New Project (5)
Published on

ಬೆಂಗಳೂರು: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಲ್ಲಿ ಭಾನುವಾರದವರೆಗೂ ಬಾರ್​ ಮತ್ತು ಪಬ್​ಗಳನ್ನ ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಸ್ಯಾಂಡಲ್​ವುಡ್​ನ ಪುನೀತ್​ ರಾಜ್​ಕುಮಾರ್​ ಅವರ ನಿಧನದ ಸುದ್ದಿಯನ್ನ ಕನ್ನಡಿಗರು ಮಾತ್ರವಲ್ಲ, ದೇಶಾದ್ಯಂತ ಅಸಂಖ್ಯ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ನೆಚ್ಚಿನ ನಟ ಅಪ್ಪು ಇನ್ನಿಲ್ಲ ಎಂಬುದು ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕನ್ನಡ ಚಿತ್ರರಂಗದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಹಲವೆಡೆ ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚಲಾಗಿದೆ. ಜಿಮ್​ಗಳೂ 2 ದಿನ ಬಂದ್​ ಆಗಲಿವೆ. ಚಲನಚಿತ್ರ ಮಂದಿರಗಳ ಬಾಗಿಲನ್ನೂ ಮುಚ್ಚಲಾಗಿದೆ.

ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡಬೇಡಿ. ಪುನೀತ್​ ಅವರನ್ನ ಅತ್ಯಂತ ಗೌರವಯುತವಾಗಿ, ಶಾಂತಿಯುತವಾಗಿ ಕಳುಹಿಸಿ ಕೊಡಲು ಸಹಕರಿಸಿ. ಅವರ ಅಗಲಿಕೆ ನೋವು ತೀವ್ರವಾಗಿ ಕಾಡುತ್ತಿದೆ. ಹಾಗಂತ ಅಭಿಮಾನಿಗಳು ತಾಳ್ಮೆ, ಸ್ಥಿಮಿತ ಕಳೆದುಕೊಳ್ಳಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net