

ರಾಯಚೂರು: ವಾರದ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಬೆಂಗಳೂರಿನ ಹೋಟೆಲ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ರಾಯಚೂರು ಎಸಿ ಕಚೇರಿಯಲ್ಲಿ ಎಫ್ಡಿಸಿ ಆಗಿದ್ದ ಪ್ರಕಾಶ್ ಬಾಬು ಆ.23ರಂದು ನಾಪತ್ತೆಯಾಗಿದ್ದರು. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕಾಶ್ ಬಾಬು ಅವರ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 2 ತಂಡ ರಚಿಸಿದ್ದರು.
ಪ್ರಾರಂಭದಲ್ಲಿ ಪ್ರಕಾಶ್ಬಾಬು ಗೋವಾದಲ್ಲಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತಾದರೂ ಅವರು ಮಾತ್ರ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ 8 ದಿನಗಳ ಬಳಿಕ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಿಂದುಸ್ತಾನ್ ಹೋಟೆಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಡಿಟ್ ಟೀಂ ಜಿಲ್ಲೆಗೆ ಬರುತ್ತೆ ಅನ್ನೋ ಮಾಹಿತಿ ತಿಳಿದ ಬಳಿಕ ಪ್ರಕಾಶ್ ಬಾಬು ನಾಪತ್ತೆಯಾಗಿದ್ದರು. ಇದಾದ ಒಂದು ವಾರಕ್ಕೆ ಶವವಾಗಿ ಪತ್ತೆಯಾಗಿದ್ದು, ಅನುಮಾನ ಮೂಡಿಸಿದೆ. ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.