ಮಳೆಗೆ ಕಾಂಪೌಂಡ್​ ಕುಸಿತ: ಶೆಡ್​ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ದುರಂತ ಸಾವು

New Project(55)
Published on

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್​ಮೆಂಟ್​ನ ತಡೆಗೋಡೆ ಕುಸಿದು ತಡರಾತ್ರಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.

ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಕಾಂಪೌಂಡ್​ ಕೂಲಿ ಕಾರ್ಮಿಕರು ಮಲಗಿದ್ದ ಶೆಡ್ ಮೇಲೆ ಕುಸಿದಿದೆ. ಗಂಭಿರ ಗಾಯಗೊಂಡ ಕಾರ್ಮಿಕರ ಪೈಕಿ ನಾಲ್ವರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಮನೋಜ್ ಕುಮಾರ್ ಸದಯ್( 35 ), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದಯ್ (22) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಶೆಡ್​ನಲ್ಲಿದ್ದ ಇನ್ನೂ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಶೆಡ್ ಪಕ್ಕದಲ್ಲೇ ಹುಡಾನ್ ವೇರ್​ ಹೌಸ್​ನ ತಡೆಗೋಡೆಗೆ ಹೊಂದಿಕೊಂಡಂತೆ ಶೆಡ್​ ನಿರ್ಮಾಣ ಮಾಡಲಾಗಿತ್ತು. ಅಕ್ಕಪಕ್ಕದಲ್ಲೇ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಈ ಶೆಡ್​ನಲ್ಲಿ ಮಲಗಿದ್ದರು. ತಡೆಗೋಡೆ ಇವರ ಪ್ರಾಣವನ್ನೇ ಬಲಿ ಪಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸಚಿವ ಎಂಟಿಬಿ ನಾಗರಾಜ್ ಭೇಟಿ ನೀಡಿ ಮಾಹಿತಿ ಪಡೆದರು. ರಾಜಕಾಲುವೆಗಳ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net