

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗೆ ಅಚ್ಚರಿ ರೂಪದಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಸಿರುವ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಪಾಲಿಗೆ ಸಂಕಷ್ಟ ತಂದೊಡ್ಡಿದೆ. ನಿನ್ನೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದ ಕುಪ್ಪೇಂದ್ರ ರೆಡ್ಡಿ, ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದ್ದಕ್ಕಿದ್ದಂತೆ ಕಾಂಗ್ರೆಸ್ 2ನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದೇಕೆ? ಅಚ್ಚರಿ ರಾಜ್ಯ ನಾಯಕರ ಲೆಕ್ಕಾಚಾರ ಏನಿರಬಹುದು? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಕಾಂಗ್ರೆಸ್ನ ಲೆಕ್ಕಾಚಾರ ಏನಿರಬಹುದು ಎಂಬುದಕ್ಕೆ ಇಲ್ಲಿದೆ ಉತ್ತರ.