ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ: ಏಕವಚನದಲ್ಲೇ ರಮೇಶ್​ ಜಾರಕಿಹೊಳಿ ವಾಗ್ದಾಳಿ

siddaramaiah ramesh jarakiholi
Published on

ಬೆಳಗಾವಿ: ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಒಬ್ಬ ಹಿಂದುಳಿದ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಅವನನ್ನು ಕುರುಬರೆಲ್ಲರೂ ರಿಜೆಕ್ಟ್ ಮಾಡಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್​ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಇದಕ್ಕೆ ಕಾರಣ ರಮೇಶ್​ ಜಾರಕಿಹೊಳಿ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ರಮೇಶ್​ ಜಾರಕಿಹೊಳಿ, ಸಿದ್ದರಾಮಯ್ಯ ಕಥೆ ಮುಗಿದಿದೆ. ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ. ನಮ್ಮ ಪಕ್ಷದಲ್ಲಿ ಏನಾಗಿದೆ, ಏನಾಗಿಲ್ಲ ಎಂಬುದುರ ಬಗ್ಗೆ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದರ ಬಗ್ಗೆ ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ‌. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿ.ಕೆ. ಶಿವಕುಮಾರ್ ಬಗ್ಗೆ ಬಹಳ ಕಠೋರವಾಗಿ ಹೇಳುತ್ತೇನೆ ಎಂದರು.

ಮತದಾನದ ಕೊನೆಯ ಮೂರು ದಿನಗಳಲ್ಲಿ ಜಿಲ್ಲೆಯ ಚಿತ್ರಣ ಬದಲಾಯಿತು. ಬಿಜೆಪಿಗೆ ಹೋಗುವ ಕುರಿತು ಲಖನ್ ಜಾರಕಿಹೊಳಿ‌ ತೀರ್ಮಾನ ತೆಗೆದುಕೊಳ್ಳಬೇಕು. ಲಖನ್ ಜಾರಕಿಹೊಳಿ‌ ಕೊನೆಯ ಮೂರು ದಿನ ನಮ್ಮ ಕೈಗೆ ಸಿಗಲಿಲ್ಲ‌. ಚುನಾವಣೆ ಚಿತ್ರಣ ಬದಲಾಗಿದ್ದಕ್ಕೆ ನಾನು ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದೆ. ಗುಡ್ಡಕ್ಕೆ ಶಕ್ತಿ ಹೊರುವ ತಾಕ್ಕತ್ತು ಇದೆ ಬಿಡಿ ಎನ್ನುವ ಮೂಲಕ ಬಿಜೆಪಿ ಸೋಲಿನ ಹೊಣೆಯನ್ನ ನನಗೆ ಕಟ್ಟಿದರೆ ಹೊರಲು ಸಿದ್ಧ ಎಂಬತೆ ಹೇಳಿದರು.

ಸಂಚು ನಡೆದಿದ್ದರ ಬಗ್ಗೆ ಕನ್ಫರ್ಮ್ ಇಲ್ಲ. ವಿಚಾರ ಮಾಡಿ ಮಾತಾಡ್ತೇನಿ. ಲೀಡರ್ ಆದವರಿಗೆ ಸೋಲಿನ ಪಟ್ಟ ಕಟ್ಟುತ್ತಾರೆ. ನಾನು ಕಾಂಗ್ರೆಸ್ ಅನ್ನು ಸೋಲಿಸುತ್ತೇನೆ ಅಂತಾ ಹಠಕ್ಕೆ ಬಿದ್ದಿದ್ದು ನಿಜ. ಇವತ್ತು ಅವರ ಪಕ್ಷ ಗೆದ್ದಿದೆ. ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net